Ninna Kangala (From “Badavara Bandhu”) Lyrics

0
25
ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆಯಾ ಹೇಳಿವೆ
ನಿನ್ನ ಪ್ರೇಮದ ನುಡಿಯ ಕೇಳಿ ನೂರು ನೆನಪು ಮೂಡಿವೆ

ತಂದೆಯಾಗಿ ತಾಯಿಯಾಗಿ ಮಮತೆಯಿಂದ ಬೆಳೆಸಿದೆ
ತಂದೆಯಾಗಿ ತಾಯಿಯಾಗಿ ಮಮತೆಯಿಂದ ಬೆಳೆಸಿದೆ
ಬಿಸುಲು ಮಳೆಗೆ ನರಳದಂತೆ ನಿನ್ನ ನೆರಳಲಿ ಸಲಹಿದೆ
ಆ ಪ್ರೀತಿಯ ಮನ ಮರೆವುದೆ
ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆಯಾ ಹೇಳಿವೆ
ನಿನ್ನ ಪ್ರೇಮದ ನುಡಿಯ ಕೇಳಿ ನೂರು ನೆನಪು ಮೂಡಿವೆ
ಬಳ್ಳಿಯಂತೆ ಹಬ್ಬಿ ನಿನ್ನಾ ಆಸರೆಯಲಿ ಬೆಳೆದೆನು
ಬಳ್ಳಿಯಂತೆ ಹಬ್ಬಿ ನಿನ್ನಾ ಆಸರೆಯಲಿ ಬೆಳೆದೆನು
ನನ್ನ ತಾಯಿಯ ಪಾದದಾಣೆ ಬೇರೆ ಏನನೂ ಅರಿಯೆನು
ನೀನೆ ನನ್ನ ದೇವನು
ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆಯಾ ಹೇಳಿವೆ
ನಿನ್ನ ಪ್ರೇಮದ ನುಡಿಯ ಕೇಳಿ ನೂರು ನೆನಪು ಮೂಡಿವೆ
ನೀನು ನಕ್ಕರೆ ನಾನು ನಗುವೇ ಅತ್ತರೇ ನಾ ಅಳುವೆನು

ನಿನ್ನ ಉಸಿರಲಿ ಉಸಿರು ಬೆರೆತಿರೆ ನಿನ್ನಲೊಂದಾಗಿರುವೆನು
ನಾ ನಿನ್ನ ಕಾಣದೇ ಬದುಕೆನು
ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆಯಾ ಹೇಳಿವೆ
ನಿನ್ನ ಪ್ರೇಮದ ನುಡಿಯ ಕೇಳಿ ನೂರು ನೆನಪು ಮೂಡಿವೆ
ನೂರು ನೆನಪು ಮೂಡಿವೆ

LEAVE A REPLY

Please enter your comment!
Please enter your name here